2 ಪೂರ್ವಕಾಲದ ವೃತ್ತಾಂತ 27 (2 Chronicles 27)

Kannada Bible — Kannada (ಕನ್ನಡ)

1 ಯೋತಾಮನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆ ಇವನ ತಾಯಿ.

2 ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

3 ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

4 ಇದಲ್ಲದೆ, ಇವನು ಜುದೇಯ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.

5 ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರ ಮೇಲೆ ಜಯಗಳಿಸಿದನು; ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ , ಕಿಲೋಗ್ರಾಂ ಬೆಳ್ಳಿ, ಮೆಟ್ರಿಕ್ ಟನ್ ಗೋದಿ, ಮೆಟ್ರಿಕ್ ಟನ್ [] ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.

6 ಯೋತಾಮನು ತನ್ನ ದೇವರಾದ ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಂಡಿದ್ದರಿಂದ ಶಕ್ತಿಶಾಲಿ ಆದನು.

7 ಯೋತಾಮನ ಉಳಿದ ಚರಿತ್ರೆ ಅವನ ಯುದ್ಧಗಳು ಹಾಗು ಪ್ರವರ್ತನೆಗಳು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿರುತ್ತವೆ.

8 ಅವನು ತನ್ನ ಇಪ್ಪತ್ತೈದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.

9 ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಹಾಜನು ಅರಸನಾದನು.

  • 2 Chronicles 26 — previous chapter
  • 2 Chronicles 28 — next chapter
  • 2 Chronicles 27 — English (KJV)
  • 2 Chronicles 27 — English (WEB)
  • 2 Chronicles 27 — Tamil (தமிழ்)
  • 2 Chronicles 27 — Hindi (हिंदी)
  • 2 Chronicles 27 — Malayalam (മലയാളം)