ಎಜ್ರ 1 (Ezra 1)

Kannada Bible — Kannada (ಕನ್ನಡ)

1 ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:

2 ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.

3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!

4 ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.

5 ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.

6 ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.

7 ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು.

8 ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.

9 ಆ ಸಾಮಾನುಗಳ ಪಟ್ಟಿ ಹೀಗಿದೆ :- ಬಂಗಾರದ ಬೋಗುಣಿಗಳು — ಬೆಳ್ಳಿಯ ಬೋಗುಣಿಗಳು — ಇತರ ಬೋಗುಣಿಗಳು — ಚಿನ್ನದ ಬಟ್ಟಲುಗಳು — ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು — ಇತರ ಪಾತ್ರೆಗಳು —

11 ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - : ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.

  • 2 Chronicles 36 — previous chapter
  • Ezra 2 — next chapter
  • Ezra 1 — English (KJV)
  • Ezra 1 — English (WEB)
  • Ezra 1 — Tamil (தமிழ்)
  • Ezra 1 — Hindi (हिंदी)
  • Ezra 1 — Malayalam (മലയാളം)