Kannada Bible — Kannada (ಕನ್ನಡ)
1 ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.
2 ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”
3 ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.
4 ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.
5 ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.
6 ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”