Kannada Bible — Kannada (ಕನ್ನಡ)
1 ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I
2 ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II
3 ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II
4 ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II
5 ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II