ಕೀರ್ತನೆಗಳು 11 (Psalms 11)

Kannada Bible — Kannada (ಕನ್ನಡ)

1 ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II

2 “ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II

4 ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II

5 ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II

6 ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II

7 ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II

  • Psalms 10 — previous chapter
  • Psalms 12 — next chapter
  • Psalms 11 — English (KJV)
  • Psalms 11 — English (WEB)
  • Psalms 11 — Tamil (தமிழ்)
  • Psalms 11 — Hindi (हिंदी)
  • Psalms 11 — Malayalam (മലയാളം)