ಕೀರ್ತನೆಗಳು 120 (Psalms 120)

Kannada Bible — Kannada (ಕನ್ನಡ)

1 (ಯಾತ್ರಾಗೀತೆ) ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II

2 ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II

3 ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II

4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II

5 ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II

6 ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II

7 ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II

  • Psalms 119 — previous chapter
  • Psalms 121 — next chapter
  • Psalms 120 — English (KJV)
  • Psalms 120 — English (WEB)
  • Psalms 120 — Tamil (தமிழ்)
  • Psalms 120 — Hindi (हिंदी)
  • Psalms 120 — Malayalam (മലയാളം)