ಕೀರ್ತನೆಗಳು 122 (Psalms 122)

Kannada Bible — Kannada (ಕನ್ನಡ)

1 (ಯಾತ್ರಾಗೀತೆ) ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II

2 ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II

3 ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II

4 ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

5 ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II

6 ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II

7 ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II

8 ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II

9 ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II

  • Psalms 121 — previous chapter
  • Psalms 123 — next chapter
  • Psalms 122 — English (KJV)
  • Psalms 122 — English (WEB)
  • Psalms 122 — Tamil (தமிழ்)
  • Psalms 122 — Hindi (हिंदी)
  • Psalms 122 — Malayalam (മലയാളം)