ಕೀರ್ತನೆಗಳು 125 (Psalms 125)

Kannada Bible — Kannada (ಕನ್ನಡ)

1 (ಯಾತ್ರಾಗೀತೆ) ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II

2 ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II

3 ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II

4 ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II

5 ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II

  • Psalms 124 — previous chapter
  • Psalms 126 — next chapter
  • Psalms 125 — English (KJV)
  • Psalms 125 — English (WEB)
  • Psalms 125 — Tamil (தமிழ்)
  • Psalms 125 — Hindi (हिंदी)
  • Psalms 125 — Malayalam (മലയാളം)