ಕೀರ್ತನೆಗಳು 26 (Psalms 26)

Kannada Bible — Kannada (ಕನ್ನಡ)

1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II

2 ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II

3 ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II

4 ದುಷ್ಟರ ಕೂಟದಲಿ ನಾ ಕೂರುವವನಲ್ಲ I ಕಪಟಿಗಳ ಸಂಘವನು ನಾ ಸೇರುವವನಲ್ಲ II

5 ದುರ್ಜನರ ಸಹವಾಸವದು ನನಗಸಹ್ಯ I ದುರುಳರೊಡನಾಟ ನನಗೆ ಬೇಡವಯ್ಯಾ II

6 ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II

7 ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II

8 ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II

9 ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II

10 ಇದೆ ಆ ಜನರ ಕೈಗಳಲಿ ಕೆಡುಕನ I ಬಲಗೈ ತುಂಬ ಲಂಚಕೋರತನ II

11 ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II

12 ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II

  • Psalms 25 — previous chapter
  • Psalms 27 — next chapter
  • Psalms 26 — English (KJV)
  • Psalms 26 — English (WEB)
  • Psalms 26 — Tamil (தமிழ்)
  • Psalms 26 — Hindi (हिंदी)
  • Psalms 26 — Malayalam (മലയാളം)