ಕೀರ್ತನೆಗಳು 3 (Psalms 3)

Kannada Bible — Kannada (ಕನ್ನಡ)

1 ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II

2 “ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II

3 ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II

4 ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II

5 ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II

6 ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II

7 ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II

8 ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II

  • Psalms 2 — previous chapter
  • Psalms 4 — next chapter
  • Psalms 3 — English (KJV)
  • Psalms 3 — English (WEB)
  • Psalms 3 — Tamil (தமிழ்)
  • Psalms 3 — Hindi (हिंदी)
  • Psalms 3 — Malayalam (മലയാളം)