ಕೀರ್ತನೆಗಳು 62 (Psalms 62)

Kannada Bible — Kannada (ಕನ್ನಡ)

1 ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II

2 ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II

3 ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II

4 ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II

5 ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II

6 ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II

7 ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II

8 ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II

9 ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II

10 ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II

11 ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II

12 ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II

  • Psalms 61 — previous chapter
  • Psalms 63 — next chapter
  • Psalms 62 — English (KJV)
  • Psalms 62 — English (WEB)
  • Psalms 62 — Tamil (தமிழ்)
  • Psalms 62 — Hindi (हिंदी)
  • Psalms 62 — Malayalam (മലയാളം)