ಕೀರ್ತನೆಗಳು 8 (Psalms 8)

Kannada Bible — Kannada (ಕನ್ನಡ)

1 ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II

2 ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II

3 ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

4 ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II

5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

6 ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

7 ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II

9 ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II

  • Psalms 7 — previous chapter
  • Psalms 9 — next chapter
  • Psalms 8 — English (KJV)
  • Psalms 8 — English (WEB)
  • Psalms 8 — Tamil (தமிழ்)
  • Psalms 8 — Hindi (हिंदी)
  • Psalms 8 — Malayalam (മലയാളം)