ಕೀರ್ತನೆಗಳು 85 (Psalms 85)

Kannada Bible — Kannada (ಕನ್ನಡ)

1 ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II

2 ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II

3 ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II

4 ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II

5 ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?

6 ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II

7 ತೋರಿಸೆಮಗೆ ಪ್ರಭು ಕರುಣೆಯನು I ಅನುಗ್ರಹಿಸೆಮಗೆ ರಕ್ಷಣೆಯನು II

8 ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II

9 ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II

10 ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II

11 ಸತ್ಯತೆಯು ಹುಟ್ಟುವುದು ಭೂಮಿಯಿಂದ I ನೀತಿಯು ದೃಷ್ಟಿಸುವುದು ಗಗನದಿಂದ II

12 ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II

13 ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II

  • Psalms 84 — previous chapter
  • Psalms 86 — next chapter
  • Psalms 85 — English (KJV)
  • Psalms 85 — English (WEB)
  • Psalms 85 — Tamil (தமிழ்)
  • Psalms 85 — Hindi (हिंदी)
  • Psalms 85 — Malayalam (മലയാളം)