ಕೀರ್ತನೆಗಳು 87 (Psalms 87)

Kannada Bible — Kannada (ಕನ್ನಡ)

1 ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II

2 ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II

3 ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II

4 “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II

5 ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II

6 ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II

7 ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II

  • Psalms 86 — previous chapter
  • Psalms 88 — next chapter
  • Psalms 87 — English (KJV)
  • Psalms 87 — English (WEB)
  • Psalms 87 — Tamil (தமிழ்)
  • Psalms 87 — Hindi (हिंदी)
  • Psalms 87 — Malayalam (മലയാളം)