ಕೀರ್ತನೆಗಳು 95 (Psalms 95)

Kannada Bible — Kannada (ಕನ್ನಡ)

1 ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II

2 ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II

3 ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II

4 ಆತನ ಕೈಯಲ್ಲಿವೆ ಬುವಿಯಂತರಾಳಗಳು I ಆತನವೇ ಪರ್ವತಗಳಾ ತುತ್ತತುದಿಗಳು II

5 ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II

6 ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II

8 ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II

9 ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II

10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II

11 ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II

  • Psalms 94 — previous chapter
  • Psalms 96 — next chapter
  • Psalms 95 — English (KJV)
  • Psalms 95 — English (WEB)
  • Psalms 95 — Tamil (தமிழ்)
  • Psalms 95 — Hindi (हिंदी)
  • Psalms 95 — Malayalam (മലയാളം)