ಕೀರ್ತನೆಗಳು 98 (Psalms 98)

Kannada Bible — Kannada (ಕನ್ನಡ)

1 ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

2 ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II

3 ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

4 ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II

5 ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II

6 ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II

7 ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II

8 ಚಪ್ಪಾಳೆ ಹೊಡೆಯಲಿ ನದಿಗಳು I ತಟ್ಟಾಡಲಿ ಬೆಟ್ಟಗುಡ್ಡಗಳು II

9 ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II

  • Psalms 97 — previous chapter
  • Psalms 99 — next chapter
  • Psalms 98 — English (KJV)
  • Psalms 98 — English (WEB)
  • Psalms 98 — Tamil (தமிழ்)
  • Psalms 98 — Hindi (हिंदी)
  • Psalms 98 — Malayalam (മലയാളം)